ತವರಿಗೆ ಬಂದ ಭಾರತೀಯರು: ಆಫ್ಘಾನಿಸ್ತಾನದಿಂದ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ ಬೆಂಗಳೂರು, ಆಗಸ್ಟ್ 22, 2021 (..):ಆಫ್ಘಾನಿಸ್ತಾನದಿಂದ ಭಾರತೀಯ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ ಭರದಿಂದ ಸಾಗಿದೆ. 87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ. ಏರ್‌ ಇಂಡಿಯಾ 1956 ವಿಮಾನದಲ್ಲಿ 87 ಭಾರತೀಯರು ತಜಕಿಸ್ತಾನದ ಮೂಲಕ ನವದೆಹಲಿಗೆ ಮರಳುತ್ತಿದೆ. ಈ ವಿಮಾನದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಇದ್ದು, ಐಎಎಫ್‌ ಏರ್‌ಕ್ರಾಫ್ಟ್‌ ಮೂಲಕ ಕಾಬೂಲ್‌ನಿಂದ ಪ್ರಯಾಣಿಕರನ್ನು ಹೊರ ಒಯ್ಯಲಾಗಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಟ್ವೀಟ್‌ ಮಾಡಿದ್ದಾರೆ. ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರಲಾಗುತ್ತಿದೆ. ಏರ್‌ ಇಂಡಿಯಾ 1956 ವಿಮಾನದ ಮೂಲಕ 87 ಭಾರತೀಯರು ತಜಕಿಸ್ತಾನದಿಂದ ನವದೆಹಲಿಗೆ ಹೊರಟಿದ್ದಾರೆ.