ಆ.23 ರಿಂದ ಶಾಲಾ-ಕಾಲೇಜು ಆರಂಭ ಹಿನ್ನೆಲೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ. ಬೆಂಗಳೂರು,ಆಗಸ್ಟ್,21,2021(..):ಆಗಸ್ಟ್ 23ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣ ಮಾಡಲು ಬಿಎಂಟಿಸಿ ಅವಕಾಶ ಮಾಡಿಕೊಟ್ಟಿದೆ. ಆಗಸ್ಟ್ 23 ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜುಗಳು ಆರಂಭಗೊಳ್ಳುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಬಿಎಂಟಿಸಿ ಬಸ್ ಗಳಲ್ಲಿ ತೆರಳುವುದಕ್ಕೆ ಬೆಂಗಳೂರು ಬಿಎಂಟಿಸಿ ಅನುಮತಿ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಬಿಎಂಟಿಸಿ, ರಾಜ್ಯ ಸರ್ಕಾರದ ನಿರ್ದೇಶನದಂತೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು 9 ರಿಂದ 12ನೇ ತರಗತಿಗಳು ದಿನಾಂಕ 23-08-2021ರಿಂದ ಪ್ರಾರಂಭಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಗುಣವಾಗುವಂತೆ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸು ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ, ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ದಿನಾಂಕ 23-08-2021ರಿಂದ ಮುಂದಿನ ಆದೇಶದವರೆಗೂ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲಾ, ಕಾಲೇಜುಗಳವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದೆ. … . 23: , . 21, 2021 (..): 23, 2021, .., . () . 9th 12 23. , , .: / / / 23/ / / : - - – – - -.