ಹಿಂಡಲಗಾ ಜೈಲಿನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ರಿಲೀಸ್. ಬೆಳಗಾವಿ,ಆಗಸ್ಟ್,21,2021(..):ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇಂದು ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸತತ 9 ತಿಂಗಳ ಕಾಲ ಜೈಲುವಾಸ ಅನುಭವಿಸಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ಇಂದು ಬಿಡುಗಡೆಯಾಗಿದ್ದಾರೆ. ಇನ್ನು ವಿನಯ್ ಕುಲಕರ್ಣಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿನಯ್ ಕುಲಕರ್ಣಿಗೆ ರಾಕಿ ಕಟ್ಟಿ ಸ್ವಾಗತಿಸಿದರು. ಜೈಲಿನಿಂದ ರಿಲೀಸ್ ಆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುತ್ತೇನೆ. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನನಗೆ ಜೈಲುವಾಸ ಟಾಸ್ಕ್ ನಂತೆ ಇತ್ತು . ಹಲವು ಬದಲಾವಣೆಗಳು ಕಂಡು ಬಂದಿದೆ. ಮತ್ತೆ ಹೋರಾಟ ಮಾಡಿ ಕೇಸ್ ನಿಂದ ಮುಕ್ತಿ ಪಡೆಯುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ಸಹ ಸಾಕ್ಷ್ಯನಾಶ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಲಭಿಸಿರಲಿಲ್ಲ. ಇದೀಗ ಕಳೆದ ಎರಡು ದಿನಗಳ ಹಿಂದೆ ಸಾಕ್ಷ್ಯನಾಶ ಪ್ರಕರಣದಲ್ಲೂ ಜಾಮೀನು ಸಿಕ್ಕಿದ್ದು ಈ ಹಿನ್ನೆಲೆಯಲ್ಲಿ ಇಂದು ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ….. , 21, 2021 (..): . 9 . . . . . “ . . . ,” . ’ . ’ . , , .: / / / / : - - –