ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಹಿನ್ನೆಲೆ: ಪೊಲೀಸರಿಂದ ಬಿಗಿ ಭದ್ರತೆ ಮೈಸೂರು,ಸೆಪ್ಟಂಬರ್,27,2024 (..):ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದು ಇನ್ನೊಂದೆಡೆ ಸಿಎಂ ವಿರುದ್ದ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ಭದ್ರತೆ ಹೆಚ್ಚಿಸಿದ್ದಾರೆ. ಇಂದು ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಡಿಪಿ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಮೈಸೂರು ಜಿಲ್ಲಾಪಂಚಾಯತ್ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. : , , , ,