ಮುಂದಿನ ವಾರ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಆಗಸ್ಟ್,20,2021(..):ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಎರಡು ಬಾರಿ ದೆಹಲಿಗೆ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮುಂದಿನ ವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಸಿಎಂ ಆದ ಬಳಿಕ ದೆಹಲಿಗೆ ತೆರಳಿ ಕೇಂದ್ರದ ನಾಯಕರಿಗೆ ಧನ್ಯವಾದ ಅರ್ಪಿಸಿ ವಾಪಸ್ ಆಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಮತ್ತೆ ಸಂಪುಟ ರಚನೆ ಕುರಿತು ಚರ್ಚಿಸಲು ಮತ್ತೆ ದೆಹಲಿಗೆ ತೆರಳಿದ್ದರು. ಇದೀಗ ಮುಂದಿನ ವಾರ ದೆಹಲಿಗೆ ತೆರಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ಮುಂದಿನವಾರ ದೆಹಲಿಗೆ ತೆರಳಿ ಕೇಂದ್ರ ಸಚಿವರ ಜತೆ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. : - – - .