ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ ಬೊಮ್ಮಾಯಿ. ಬೆಂಗಳೂರು,ಆಗಸ್ಟ್,20,2021(..):ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮವಾಗಿದ್ದು, ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಟ್ವಿಟ್ ಮಾಡಿ ಶುಭ ಕೋರಿರುವ ಸಿಎಂ ಬಸವರಾಜ ಬೊಮ್ಮಾಯಿ, “ನಾಡಿನ ಎಲ್ಲ ಭಕ್ತಜನರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿ, ಆರೋಗ್ಯ ಭಾಗ್ಯಗಳನ್ನು ಕರುಣಿಸಲಿ. ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ, ಸುರಕ್ಷಿತವಾಗಿ ಮನೆಯಲ್ಲಿ ಹಬ್ಬ ಆಚರಿಸಿ ಎಂದು ಹೇಳಿದ್ದಾರೆ. : - - – – -