ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ. ಬೆಂಗಳೂರು,ಆಗಸ್ಟ್,17,2021(..):ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. ನಾಳೆ ಮೂರು ಇಲಾಖೆಗಳ ಸಭೆಯನ್ನ ಮಾಡ್ತೇನೆ. ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸುತ್ತೇನೆ. ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆ ಮಾಡಬೇಕು. ಸ್ವಾತಂತ್ರ್ಯ ಘೋಷಣೆ ಮಾಡಿದ ಯೋಜನೆಗಳು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - – .3-- -