ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ವಿರುದ್ಧ ಗವಾಸ್ಕರ್ ಕಿಡಿಕಾರಲು ಕಾರಣವೇನು! ಬೆಂಗಳೂರು, ಆಗಸ್ಟ್ 17, 2021 (..):ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳದಿರುವುದಕ್ಕೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ಇದಕ್ಕೆ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ತಂಡದ ಈ ಅನುಭವಿ ಆಟಗಾರ ಕೊಯ್ಲಿ ಯಾವ ಕಾರಣಕ್ಕಾಗಿ ಪರದಾಡುತ್ತಿದ್ದಾರೆ ಎಂದು ಗವಾಸ್ಕರ್ ಪ್ರಶ್ನಿಸಿದ್ದಾರೆ. ಮೊದಲ ಪಂದ್ಯದಲ್ಲಿಯೂ ರನ್‌ಗಳಿಸಲು ವಿಫಲವಾಗಿದ್ದ ಕೊಯ್ಲಿ. ಟೆಸ್ಟ್ ಸರಣಿಯ 2ನೇ ಟೆಸ್ಟ್’ನಲ್ಲೂ ಭಾರೀ ಹಿನ್ನೆಡೆಯನ್ನು ಅನುಭವಿಸಿದ್ದಾರೆ.