ಅಟಲ್ ಬಿಹಾರಿ ವಾಜಪೇಯಿ ಬಗ್ಗೆ ಕೀಳಾಗಿ ಮಾತನಾಡುವುದು ಕಾಂಗ್ರೆಸ್ ಅವನತಿಗೆ ಕಾರಣ- ಮಾಜಿ ಸಿಎಂ ಜಗದೀಶ್ ಶೆಟ್ಟರ್. ಹುಬ್ಬಳ್ಳಿ,ಆಗಸ್ಟ್,16,2021(..):ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತ ಶತ್ರು, ಜಗತ್ತು ಮೆಚ್ಚಿದ ನಾಯಕ.. ಅವರ ಬಗ್ಗೆ ಕೀಳಾಗಿ ಮಾತನಾಡುವುದು ಕಾಂಗ್ರೆಸ್ ಅವನತಿಗೆ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಾಜಪೇಯಿ ಅವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ ನವರ ಕೊನೇ ಕ್ಷಣಗಳು ಹಾಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ವಾಜಪೇಯಿ ಅವರ ಬಗ್ಗೆ ಅಂತಹ ಮಾತನಾಡಿರುವುದು ನಾಚಿಕೆಗೇಡಿನ ಸಂಗತಿ. ಇದು ಕಾಂಗ್ರೆಸ್ ನವರ ಕೊನೇ ಕ್ಷಣಗಳು ಎಂದು ಕಿಡಿಕಾರಿದರು. : - – - -