ಶಿವಣ್ಣನ 124ನೇ ಚಿತ್ರಕ್ಕೆ ಕಿಚ್ಚ ಸುದೀಪ್ ಕ್ಲ್ಯಾಪ್ ! ಬೆಂಗಳೂರು, ಆಗಸ್ಟ್ 17, 2021 (..):ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 124ನೇ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಸಿನಿಮಾದ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಹೆಸರಿಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ವಿಶೇಷ ಎಂದರೆ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು ಕಿಚ್ಚ ಸುದೀಪ್. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು.