ಮೊದಲ ಬಾರಿಗೆ ವಿಧಾನ ಸಭೆ, ವಿಧಾನ ಪರಿಷತ್ ಸಭಾಧ್ಯಕ್ಷರಿಂದ ಜಂಟಿಯಾಗಿ ಧ್ವಜಾರೋಹಣ ಬೆಂಗಳೂರು, ಆಗಸ್ಟ್ ೧೪, ೨೦೨೧ (..): ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಬಹುಶಃ ಮೊಟ್ಟ ಮೊದಲ ಬಾರಿಗೆ ರಾಜ್ಯದ ಎರಡೂ ಶಾಸಕಾಂಗಗಳು, ಕರ್ನಾಟಕ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತು, ೧೫ನೇ ಆಗಸ್ಟ್ ೨೦೨೧ರಂದು, ಭಾನುವಾರ ಜೊತೆಗೂಡಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ. ಮೇಲ್ಮನೆಯ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಹಾಗೂ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನ ಸೌಧದ ಮುಂದೆ ನಾಳೆ ಬೆಳಿಗ್ಗೆ ೯.೦೦ ಗಂಟೆಗೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಾದ ನಂತರ ಅಧ್ಯಕ್ಷೀಯ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. : - - : -- , – & – , 15th 2021. ’ , ’ 9 . ’ 10.30 . , , , .