ನಾಳೆ ಮೈಸೂರಿನಲ್ಲಿ ಬೃಹತ್ ಲೋಕ್ ಅದಾಲತ್: ಭಾಗವಹಿಸುವವರು ಸಂಚರಿಸುವದಕ್ಕೆ ಅನುಮತಿ ನೀಡಿದ ಜಿಲ್ಲಾಡಳಿತ. ಮೈಸೂರು,ಆಗಸ್ಟ್,13,2021(..):ನಾಳೆ ಮೈಸೂರಿನಲ್ಲಿ ಬೃಹತ್ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಇದರಲ್ಲಿ ಭಾಗವಹಿಸುವ ಭಾಗವಹಿಸುವ ನ್ಯಾಯವಾದಿ (ವಕೀಲರು), ದಾವೆದಾರರು, ನ್ಯಾಯಾಲಯ ಸಿಬ್ಬಂದಿಗಳು ಸಂಚರಿಸಲು ಅನುಮತಿ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೇರಳ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಅಂತೆಯೇ ಮೈಸೂರಿನಲ್ಲೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ನಡುವೆ ನಾಳೆ ನಡೆಯುವ ಬೃಹತ್ ಲೋಕ್ ಅದಾಲತ್ ನಲ್ಲಿ ಭಾಗವಹಿಸುವ ನ್ಯಾಯವಾದಿ (ವಕೀಲರು), ದಾವದಾರರು, ನ್ಯಾಯಾಲಯ ಸಿಬ್ಬಂದಿಗಳು ಸಂಚರಿಸಲು ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಷರತ್ತುಗಳನ್ನ ವಿಧಿಸಿ ಲೋಕ್ ಅದಾಲತ್ ನಲ್ಲಿ ಭಾಗವಹಿಸುವವರು ಸಂಚರಿಸಲು ಮೈಸೂರು ಜಿಲ್ಲಾಡಳಿತ ಅನುಮತಿ ನೀಡಿದೆ. ಷರತ್ತುಗಳು ಈ ಕೆಳಕಂಡಂತಿವೆ. 1.ಸಭೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. 2 ಸಭೆಯಲ್ಲಿ ಪಾಲ್ಗೊಂಡವರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸುವುದು. : – - - – -