ಅಂಗಾಂಗ ದಾನಕ್ಕೆ ನಾನು ಸಹಿ ಹಾಕುತ್ತಿದ್ದೇನೆ. ನೀವೂ ಹಾಕಿ-ಸಿಎಂ ಬಸವರಾಜ ಬೊಮ್ಮಾಯಿ ಕರೆ. ಉಡುಪಿ,ಆಗಸ್ಟ್,13,2021(..)ಇಂದು ವಿಶ್ವ ಅಂಗಾಂಗ ದಾನ ದಿನ ಹಿನ್ನೆಲೆ ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರೂ ಸಹಿ ಹಾಕಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಉಡುಪಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್ಚಿನ ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕು. ಇದರಿಂದಾಗಿ ಸಾವಿರಾರು ಜನರ ಜೀವ ಉಳಿಸಬಹುದು. ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅದು ಯಶಸ್ವಿಯಾಗುತ್ತಿದೆ. ನಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಅದನ್ನು ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ. ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ 3ನೇ ಭೀತಿ ಅಲೆ ಹಿನ್ನೆಲೆ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಹೋದ ನಂತರ ಇಂದೇ ತಜ್ಞರ ತುರ್ತು ಸಭೆ ಕರೆಯುತ್ತೇನೆ. ತಜ್ಞರು ನೀಡುವ ವರದಿ ಆಧಾರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. … “ , : , 13, 2021 (..): . ‘ ,’ . “ . . ’ ’ ? . ,” . -19 3rd , . “ ’ ,” .: / / : -- –