ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಹಾಗೂ ಆರು ‘ಕೈ’ ನಾಯಕರ ಟ್ವಿಟ್ಟರ್ ಖಾತೆ ಲಾಕ್. ನವದೆಹಲಿ, ಆಗಸ್ಟ್,12,2021(..):ಟ್ವಿಟ್ಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ 6 ಮುಖಂಡರ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಲಾಕ್ ಮಾಡಿದೆ. ಟ್ವಿಟ್ಟರ್ ಲಾಕ್ ಆಗಿರುವ ಕುರಿತು ಕಾಂಗ್ರೆಸ್ ಫೇಸ್ ಬುಕ್ ಮೂಲಕ ಮಾಹಿತಿ ನೀಡಿದೆ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಮಾಧ್ಯಮ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಸೇರಿದಂತೆ ಐದು ಹಿರಿಯ ನಾಯಕರ ಹ್ಯಾಂಡಲ್ ಗಳ ವಿರುದ್ಧ ಇದೇ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಬುಧವಾರ ತಡವಾಗಿ ಹೇಳಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಅಜಯ್ ಮಾಕೆನ್, ಲೋಕಸಭೆಯಲ್ಲಿ ಪಕ್ಷದ ವಿಪ್ ಮಾಣಿಕ್ ಕಮ್ ಠಾಗೋರ್, ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆಗಳಿಗೆ ಟ್ವಿಟ್ಟರ್ ಲಾಕ್ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ. ಹೀಗೆ ತಮ್ಮ ಪಕ್ಷದ ಕಾಂಗ್ರೆಸ್ ಮುಖಂಡರ ಟ್ವಿಟ್ಟರ್ ಖಾತೆಗಳನ್ನು ಲಾಕ್ ಮಾಡಿದರೆ ನಮ್ಮ ಹೋರಾಟವೇನು ನಿಲ್ಲುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ವಿರುದ್ಧ ಕಿಡಿಕಾರಿದೆ. … . . , 12, 2021 (..): . . , . , , - ’ ., .: / / : - –- -