ರುಕ್ಷ್ಮಿಣಿ ಮಾದೇಗೌಡರ ಸದಸ್ಯತ್ವ ಅಸಿಂಧು ಹಿನ್ನೆಲೆ: ತೆರವಾಗಿದ್ಧ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಫಿಕ್ಸ್. ಮೈಸೂರು,ಆಗಸ್ಟ್,12,2021(..):ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ 36ರ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಸೆಪ್ಟೆಂಬರ್ 3 ಕ್ಕೆ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ 36ಕ್ಕೆ ಉಪಚುನಾವಣೆ ನಡೆಯಲಿದೆ. ರುಕ್ಷ್ಮಿಣಿ ಮಾದೇಗೌಡ ಪಾಲಿಕೆ ಸದಸ್ಯತ್ವ ಅಸಿಂಧು ಹಿನ್ನೆಲೆ, ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕ ನಿಗದಿ ಮಾಡಿದೆ. ಚುನಾವಣೆ ಸಂದರ್ಭದಲ್ಲಿ ರುಕ್ಷ್ಮಿಣಿ ‌ಮಾದೇಗೌಡ ಅವರು ಸುಳ್ಳು ಅಫಿಡೆವಿಟ್ ಸಲ್ಲಿಸಿದ್ದಾರೆಂದು ಆರೋಪಿಸಿ ಪ್ರತಿಸ್ಪರ್ಧಿ ರಜಿನಿ ಅಣ್ಣಯ್ಯ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ರುಕ್ಷ್ಮಿಣಿ ಮಾದೇಗೌಡ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿತ್ತು. ಸದಸ್ಯತ್ವ ಅಸಿಂಧುಗೊಂಡ ಹಿನ್ನೆಲೆ ರುಕ್ಷ್ಮಿಣಿ ಮಾದೇಗೌಡ ಅವರು ಮೇಯರ್ ಅಧಿಕಾರ ಕಳೆದುಕೊಂಡಿದ್ದರು. ಇದರಿಂದ ತೆರವಾಗಿದ್ಧ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಸೆಪ್ಟಂಬರ್ 3 ರಂದು ಉಪಚುನಾವಣೆ ನಡೆಯಲಿದೆ. : –- - – -36th