ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್. ನವದೆಹಲಿ,ಆಗಸ್ಟ್,11,2021(..):ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ , ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ ಎಂಬುದಾಗಿ ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್ ನ್ಯಾಯಪೀಠದ ಗಮನ ತಂದರು. ಈ ವೇಳೆ ಹೈಕೋರ್ಟ್ ಗೆ ಎರಡು ತಿಂಗಳ ಒಳಗಾಗಿ ಪ್ರಕರಣ ವಿಚಾರಣೆ ನಡೆಸಬೇಕು ಎಂಬುದಾಗಿ ನಿರ್ದೇಶಿಸಿತು. ಈ ಬಳಿಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ ಷರತ್ತು ವಿಧಿಸಿ, ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕಳೆದ ಜುಲೈ.27ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. … , 11, 2021 (..): ’ , . , . , , . ’ ’ . , ’ , , . . , . , 27, 2021, .: / / / / / / : - - – -