ಆ.15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ. ಬೆಂಗಳೂರು,ಆಗಸ್ಟ್,9,2021(..):ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆಗಸ್ಟ್ 15 ಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯುತ್ತದೆ. ಆದರೆ ಈ ಬಾರಿ ಯಾವುದೇ ಸಾಂಸ್ಕೃತಿ ಕಾರ್ಯಕ್ರಮ ನಡೆಯಲ್ಲ. ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು, ಆಹ್ವಾನಿತರು ಮಾತ್ರ ಭಾಗವಹಿಸಲು ಅವಕಾಶವಿದ್ದು, ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎನ್ನುವುದರ ಬಗ್ಗೆ ಶೀಘ್ರವೇ ಸಿಎಸ್ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ಗೌರವ್ ಗುಪ್ತ ತಿಳಿಸಿದರು. … – : , 9, 2021 (..): -19 3rd , 15 . . “ 15 . ’ . ,” .: / / / 15/ / : –- - ,