ಕೊರೊನಾ ಮೀಟರ್: ಮತ್ತೆ 38,628 ಮಂದಿಯಲ್ಲಿ ಸೋಂಕು ದೃಢ ಬೆಂಗಳೂರು, ಆಗಸ್ಟ್ 07, 2021 (..):ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,18,95,385ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ, ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 40,017 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,55,861ಕ್ಕೆ ತಲುಪಿದೆ. ಇಲ್ಲಿಯವರೆಗೂ ಒಟ್ಟಾರೆ 50,10,09,609 ಮಂದಿಗೆ ಲಸಿಕೆಯನ್ನು ನೀಡಲಾಗಿದೆ