ಮೇಕೆದಾಟು ಯೋಜನೆ: ಕಾಮಗಾರಿ ಶುರುವಾಗೋದು ಶತಸಿದ್ಧ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಆಗಸ್ಟ್,5,2021(..):ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕಾಮಗಾರಿ ಶುರುವಾಗೋದು ಶತಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಮೇಕೆದಾಟು ಯೋಜನೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸಚಿವರನ್ನ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಡಿಪಿಆರ್ ಆಗುತ್ತದೆ. ಬೇಗ ಕ್ಲಿಯರೆನ್ಸ್ ಸಿಗುತ್ತದೆ. ಕಾಮಗಾರಿ ಶುರುವಾಗೋದು ಶತಸಿದ್ಧ ಎಂದು ಹೇಳಿದರು. ಮೇಕೆದಾಟು ಯೋಜನೆ ಜಾರಿಗೆ ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಈ ಮೂಲಕ ತಿರುಗೇಟು ನೀಡಿದ್ದಾರೆ. .. , 5, 2021 (..): “ . ,” . ’ , . “ . . ,” .“ . . ’ . ,” .: / / / / : -- - - --