ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ತಿರುಗೇಟು. ಮೈಸೂರು,ಆಗಸ್ಟ್,5,2021(..):ಸಿಎಂ ಬಸವರಾಜಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ. ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲ ವಿಲ‌ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ ಕೆ ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ. ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆ ಎಂದು ಸೋಲಿಸಿದರು ಎಂದು ಆರೋಪಿಸಿದರು. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವು ಕುರುಬರನ್ನು ಸಚಿವರನ್ನಾಗಿ ಮಾಡಿದ್ದರು. ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ. ನಮ್ಮಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದುವರೆಗೂ ಯಾವತ್ತು ಬಿಜೆಪಿ ಪೂರ್ಣಪ್ರಮಾಣದಲ್ಲಿ ಅಧಿಕಾರ ನಡೆಸಿಲ್ಲ.ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ ಎಂದು ಕೆಎಸ್ ಈಶ್ವರಪ್ಪ ತಿಳಿಸಿದರು. ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ. ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತೆ. ಆಗ ಜಾತಿ ವಿಚಾರ ಬರೋದಿಲ್ಲ. ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. …. ’ , 5, 2021 (..): ’ , ... . , , “ . . . .. . , . . ’ .: .. / / / / / / / / : - - – -,