ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಐಟಿ ಶಾಕ್: ಮನೆ ಮೇಲೆ ದಾಳಿ, ದಾಖಲೆ ಪರಿಶೀಲನೆ ಬೆಂಗಳೂರು, ಆಗಸ್ಟ್ 5,2021(..):ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಶಾಕ್ ನೀಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆ ವೇಳೆಗೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ದೆಹಲಿಯಿಂದ ಬಂದಿರುವ 45 ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ವಸಂತನಗರದ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ರಾಜಕೀಯದ ಹೊರತಾಗಿ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು. ….. . : , , 5, 2021 (..): () , , . 6.00 . , , , , , , , . . . , .: / / / : – – - - .