ರಾಜಭವನದಿಂದ ಇಂದು ನೂತನ ಸಚಿವರ ಪಟ್ಟಿ ಬಿಡುಗಡೆ: ಮಧ್ಯಾಹ್ನ 2.15ಕ್ಕೆ ಪ್ರಮಾಣ ವಚನ. ಬೆಂಗಳೂರು,ಆಗಸ್ಟ್,4,2021(..):ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ದು ಇಂದು, ಬೆಳಿಗ್ಗೆ 11 ರಿಂದ 11.30ರೊಳಗೆ ರಾಜಭವನದಿಂದಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಪುಟ ರಚನೆ ಬಗ್ಗೆ ಹೈಕಮಾಂಡ್ ನೊಂದಿಗೆ ಚರ್ಚಿಸಿದ್ದೇನೆ. ಬೆಳಿಗ್ಗೆ 11 ಅಥವಾ 11:30ಕ್ಕೆ ರಾಜಭವನದಿಂದಲೇ ಸಚಿವರ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ. ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು : - – - –-