ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ತಾತ್ಕಾಲಿಕ ಮುಂದೂಡಿಕೆ. ಬೆಂಗಳೂರು,ಆಗಸ್ಟ್,3,2021(..):ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಕಾಲೇಜು ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಕೈಗೊಳ್ಳಲು ಉಲ್ಲೇಖಿತ ಸುತ್ತೋಲೆಯಲ್ಲಿ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು. ಅದರಂತೆ ದಿನಾಂಕ:04.08.2021 ರಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಆಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. : - - – - - – .