ಸಿಎಂ ಸ್ಥಾನದಿಂದ ಬಿಎಸ್ ವೈ ತೆಗದಿದ್ದು ವಯಸ್ಸಾಗಿದೆ ಎಂದಲ್ಲ: ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ-ಸಿದ್ಧರಾಮಯ್ಯ ಆರೋಪ ಬೆಂಗಳೂರು,ಆಗಸ್ಟ್,3,2021(..):ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ ಯಡಿಯೂರಪ್ಪರನ್ನ ತೆಗೆದಿದ್ದು ವಯಸ್ಸಾಗಿದೆ ಎಂದಲ್ಲ. ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ಸಿಎಂ ಸ್ಥಾನದಿಂದ ಬಿಎಸ್ ವೈ ಅವರನ್ನ ತೆಗೆದರು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಐಟಿ, ಇಡಿ ಇದೆ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದಾರೆ. ಆರ್​ಟಿಜಿಎಸ್ ಮೂಲಕ ಯಡಿಯೂರಪ್ಪ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡಿಯೇ ಇಲ್ಲ. ಬರೀ ತಿಥಿ ಊಟ ಮಾಡಿದ್ದಾರೆ ಅವರಿಗೆ ಮುಂಬಾಗಿಲಿಂದ ಬಂದು ಗೊತ್ತೇ ಇಲ್ಲ. ಹಿಂಬಾಗಿಲಿಂದ ಬಂದವರೇ. ನಮ್ಮ ಶಾಸಕರನ್ನ ಕರೆದುಕೊಂಡು ಹೋಗಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಟೀಕಿಸಿದರು. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಗ್ಗೆ ಈಗ ಮಾತಾಡಲ್ಲ. ಹೋಗಲಿ ಮೂರು-ನಾಲ್ಕು ತಿಂಗಳು, ಆಮೇಲೆ ಅವರ ಬಗ್ಗೆ ಮಾತಾಡುತ್ತೇನೆ. ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ಯಡಿಯೂರಪ್ಪ. ಹೀಗಾಗಿ ಬೊಮ್ಮಾಯಿ ಸ್ಟಾಂಪ್ ಆಗುವುದು ಬಿಟ್ಟು ಇನ್ನೇನ್ ಮಾಡ್ತಾರೆ ಎಂದು ಲೇವಡಿ ಮಾಡಿದರು. … : , 3, 2021 (..): “.. ’ , ,” . , “ . . ’. ,” .: / .. / -/ : – - – - - -