ದೇಶದಲ್ಲಿ ಒಂದೇ ದಿನದಲ್ಲಿ 30,549 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ. ನವದೆಹಲಿ,ಆಗಸ್ಟ್,3,2021(..):ದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ 40 ಸಾವಿರ ದಾಟುತ್ತಿದ್ದ ಒಂದು ದಿನದ ಕೊರೋನಾ ಸೋಂಕಿನ ಪ್ರಕರಣ ಇದೀಗ ಸ್ವಲ್ಪ ಇಳಿಕೆ ಕಂಡಿದೆ. ಹೌದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 30,549 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಕೊರೋನಾಗೆ ಬಲಿಯಾಗಿದ್ದು, ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 425195ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 404958 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38887 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30896354 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ದೇಶದಲ್ಲಿ 16,49,295 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 47,85,44,114 ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ. … 30,549 , 3, 2021 (..): . 24 , 30,549 , . 24 , 422 4,25,195. 4,04,958 38,887 . 3,08,96,354. 16,49,295 . 47,85,44,114.: -19 / / / 30,549 : 30,549 - - – – .