ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್: ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು. ಬೆಂಗಳೂರು,ಜೂನ್,7,2024 (..):ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು. ಪ್ರಕರಣ ಸಂಬಂಧ ಇಂದು ರಾಹುಲ್ ಗಾಂಧಿ ವಿಚಾರಣೆಗೆ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್​ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು. : , , ,