ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮೂವರು ಬೈಕ್ ಕಳ್ಳರು ಅಂದರ್. ಮೈಸೂರು,ಜುಲೈ,31,2021(..):ಮೈಸೂರಿನ ವಿವಿ ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಮಂತ್(20),ಗಿರೀಶ್( 19) ಹಾಗೂ ಮನು(20) ಬಂಧಿತ ಆರೋಪಿಗಳು. ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನ ಬಂಧಿಸಲಾಗಿದ್ದು, ಮೈಸೂರಿನ ವಿವಿಧ ಠಾಣೆಯ 9 ಕಳುವು ಪ್ರಕರಣಗಳನ್ನ ಬೇಧಿಸಲಾಗಿದೆ. ಡಿಸಿಪಿಗಳಾದ ಪ್ರದೀಪ್ ಗಂಟಿ, ಗೀತಾಪ್ರಸನ್ನ ರವರ ಮಾರ್ಗದರ್ಶನದಲ್ಲಿ ಹಾಗೂ ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ ವಿವಿ ಪುರಂ ಠಾಣೆಯ ಇನ್ಸ್ ಪೆಕ್ಟರ್ ವೆಂಕಟೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ. : - – -- -