ಮತ್ತೆ ಕನ್ನಡ ಕಡೆಗಣನೆ: ಕೇಂದ್ರ ಸರ್ಕಾರದಿಂದ ಕನ್ನಡಿಗರಿಗೆ ಬಿಗ್ ಶಾಕ್ ! ಬೆಂಗಳೂರು, ಆಗಸ್ಟ್ 1, 2021 (..):ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಇದು ಆರಂಭವಾಗಲಿದೆ. ಆದರೆ ಆ ಭಾಷೆಗಳ ಸಾಲಿನಲ್ಲಿ ಕನ್ನಡವನ್ನು ಕೈಬಿಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ () ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಈ ವಿಷಯ ತಿಳಿಸಿದ್ದಾರೆ. ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಬಂಗಾಳಿ ಎಂಬ 5 ಭಾರತೀಯ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.