ಸಂಪುಟ ರಚನೆ ವಿಚಾರ : ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇನೆ-ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ,ಜುಲೈ,31,2021(..):ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇನೆ. ಕರೆ ಬಂದ ಬಳಿಕ ಹೋಗಿ ಚರ್ಚಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಹೈಕಮಾಂಡ್ ನಿಂದ ಇನ್ನು ಯಾವ ಕರೆಯೂ ಬಂದಿಲ್ಲ. ನಾಯಕರಿಂದ ಕರೆ ಬಂದ ಕೂಡಲೇ ಹೋಗಿ ಸಂಫುಟ ರಚನೆ ಬಗ್ಗೆ ಚರ್ಚಿಸುತ್ತೇನೆ. ಮಧ್ಯಾಹ್ನದ ವೇಳೆಗೆ ಪಟ್ಟಿ ಬರುತ್ತೋ ಇಲ್ವೋ ಗೊತ್ತಿಲ್ಲ ಎಂದು ತಿಳಿಸಿದರು. ನಿನ್ನೆ ಕೇಂದ್ರ ನಾಯಕರಾದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದರು. : –- – - -