ಕೇರಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ: ಗಡಿ ಭಾಗದಲ್ಲಿ ಬಿಗಿ ಕ್ರಮಕ್ಕೆ ಸೂಚಿಸಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ. ನವದೆಹಲಿ,ಜುಲೈ,30,2021(..):ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗಡಿಭಾಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಸವರಾಜ ಬೊಮ್ಮಾಯಿ ತೆರಳಿದ್ದು ಬಿಜೆಪಿ ಹಿರಿಯ ನಾಯಕರನ್ನ ಭೇಟಿಯಾಗಲಿದ್ದಾರೆ. ಈ ಮಧ್ಯೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೇರಳ ರಾಜ್ಯದ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ. ರಾಜ್ಯದ ಗಡಿಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜ್ಯಕ್ಕೆ ವಾಪಸ್ ಆದ ಬಳಿಕ ಈ ಬಗ್ಗೆ ಸಭೆ ಮಾಡುತ್ತೇನೆ. ಕೊರೋನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದರು. … : , 30, 2021 (..): , . , . , , . “ , ,” .: / / / / / : – - – - - .