ಸಿಎಂ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲ ಎಂಬ ನಂಬಿಕೆ ಇದೆ- ಮಾಜಿ ಸಚಿವ ಉಮೇಶ್ ಕತ್ತಿ. ನವದೆಹಲಿ,ಜುಲೈ,29,2021(..): ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ ಸಚಿವ ಸಂಪುಟ ಸೇರಲು ಹಲವು ಶಾಸಕರ ಲಾಬಿ ಶುರುವಾಗಿದ್ದು ಈ ಮಧ್ಯೆ ಹಿಂದಿನ ಬಿಎಸ್ ವೈ ಸಂಪುಟದಲ್ಲಿ ಸಚಿವರಾಗಿದ್ದ ಉಮೇಶ್ ಕತ್ತಿ ಇದೀಗ ಮತ್ತೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ನವದೆಹಲಿಗೆ ತೆರಳಿರುವ ಮಾಜಿ ಸಚಿವ ಉಮೇಶ್ ಕತ್ತಿ ಮಾಧ್ಯಮಗಳ ಜತೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ. ನನ್ನನ್ನು ಬಿಟ್ಟು ಸಿಎಂ ಸಂಪುಟ ರಚಿಸಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದೆ ನಾಲ್ಕು ಬಾರಿ ಸಚಿವನಾಗಿದ್ದೆ. ಈಗ ಸಚಿವ ಸ್ಥಾನ ಸಿಗುವ ನಂಬಿಕೆ ಇದೆ. ಸಚಿವ ಸ್ಥಾನ ಸಿಕ್ಕರೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸಚಿವ ಸ್ಥಾನ ಸಿಗದಿದ್ದರೇ ಶಾಸಕನಾಗಿ ಕೆಲಸ ಮಾಡುತ್ತೇನೆ. ಇಂದು ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ, ಸಂತೋಷ್ ಅವರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ವರಿಷ್ಠರನ್ನ ಭೇಟಿಯಾಗುವೆ ಎಂದು ಉಮೇಶ್ ಕತ್ತಿ ತಿಳಿಸಿದರು. … “ ’ ”: , 29, 2021 (..): ’ . . , , ’ . “ ’ ,” .“ . . . , .. . ,” .: / / / / : –- -- -