‘ಸೂಪರ್ ಸಿಎಂ’ ಎಂಬ ಟ್ಯಾಗ್ ಲೈನ್ ನಿಂದ ನಾನು ಹೊರ ಬಂದಿದ್ದೇನೆ- ಬಿವೈ ವಿಜಯೇಂದ್ರ ಬೆಂಗಳೂರು,ಜುಲೈ,28,2021(..):ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸದ ವಿಷಯ.‌ ಅವರು ಸಿಎಂ ಆಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ನಾನು ಹೊರ ಬಂದಿದ್ದೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂಧ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ, ಅನುಭವಿ ನಾಯಕ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಖುಷಿ ತಂದಿದೆ. ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ.‌ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಹೊಸ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುರುಕುಪಡೆಯಲಿವೆ ಎಂದರು. ರಾಜಭವನದಲ್ಲಿ ನಡೆದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದರು. : - - - -