ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ- ಮಾಜಿ ಸಚಿವ ಬಿ.ಸಿ.ಪಾಟೀಲ್ ಬೆಂಗಳೂರು,ಜುಲೈ,28,2021(..):ರಾಜ್ಯದಲ್ಲಿ ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ.ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಇಂದು ಭೇಟಿ ಮಾಡಿ ಶುಭಕೋರಿದ ಮಾಜಿ ಸಚಿವ ಬಿ.ಸಿ.ಪಾಟೀಲ್,ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಹೊಸ ಸಿಎಂ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಬಿಜೆಪಿಯಲ್ಲಿಯೇ ಇದ್ದಾರೆ. ಪಕ್ಷ‌ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನವಿದೆ. ಮುಂದೆಯೂ ಕೂಡ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ. ನಾವು ಮಂತ್ರಿಯಾಗಿ ಮುಂದುವರೆಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗೆಂದ ಮಾತ್ರಕ್ಕೆ ಅದು ಶಾಡೋ ಎಂದು ಭಾವಿಸುವುದು ತಪ್ಪು. ಯಡಿಯೂರಪ್ಪ ಹಿರಿಯರು ಅನುಭವಿಗಳು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ ಎಂದರು. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ‌.ದೆಹಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆಂದು ಬಿಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. …. “ ”: .. , 28, 2021 (..): “ , . ,” .. . . , “ .. . . . ’ . . ’ , . .. . .. ,” .“ . . , ,” .. .: .. / / : – –-- -..