ಮುಂದಿನ ಸಿಎಂಗೆ ಬಿಎಸ್ ವೈ ಹೇಳಿದಂತೆ ಸಂಪೂರ್ಣ ಬೆಂಬಲ – ಶಾಸಕ ಎಂ.ಪಿ ರೇಣುಕಾಚಾರ್ಯ. ಬೆಂಗಳೂರು,ಜುಲೈ,27,2021(..):ಹೈಕಮಾಂಡ್ ಸೂಚನೆಯಂತೆ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಸಿಎಂಗೆ ಬಿಎಸ್ ವೈ ಹೇಳಿದಂತೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಸೂಚನೆಯಂತೆ ಬಿಎಸ್ ವೈ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯನ್ನ ನಾವು ಪಾಲಿಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆ ಗೊತ್ತಿಲ್ಲ ಎಂದರು. ರಾಜ್ಯದಲ್ಲಿ ಬಿಜೆಪಿ ಸದೃಢವಾಗಿದೆ. ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಚುನಾವಣೆಗೆ ಒಟ್ಟಾಗಿ ಹೋಗುತ್ತೇವೆ. ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಇನ್ನು ಸಚಿವ ಸ್ಥಾನಕ್ಕೆ ನಾನು ಲಾಬಿ ಮಾಡಿಲ್ಲ. ರಾಷ್ಟ್ರೀಯ ನಾಯಕರು ಅವಕಾಶ ನೀಡಿದರೇ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು. … : .. , 27, 2021 (..): “.. . ,” .. . ’ . “.. . . ’ ,” . ’ “ . . . .” , . “ ,” .: / .. / .. / / / : - - - - .