ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ: ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ. ಬೆಂಗಳೂರು,ಜುಲೈ,26,2021(..):ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು ಈ ಮೂಲಕ ಹಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದ ಸಿಎಂ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಬಿದ್ದಿದೆ. ಸರ್ಕಾರದ 2 ವರ್ಷದ ಸಾಧನಾ ಸಮಾವೇಶದಲ್ಲಿ ರಾಜೀನಾಮೆ ನೀಡುವುದಾಗಿ ಭಾವುಕರಾಗಿಯೇ ಘೋಷಣೆ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿರುವಂತೆ ಬಿಎಸ್ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದ ನಂತರ 2019 ಜುಲೈ 26 ರಂದು ಬಿಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. … : , 26,2021 (..): .. . , ... ’ - , . , . . .. 26, 2019, .: .. / / / / : - – - -