ದೆಹಲಿ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಮುರುಗೇಶ್ ನಿರಾಣಿ. ನವದೆಹಲಿ,ಜುಲೈ,25,2021(..):ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ಇಂದು ಸಂಜೆ ಹೈಕಮಾಂಡ್ ನಿಂದ ಸಂದೇಶ ಬಂದ ಬಳಿಕ ಸೂಕ್ತ ನಿರ್ಧಾರ ಮಾಡುತ್ತೇನೆ. ಎಂದು ಸಿಎಂ ಬಿಎಸ್ ವೈ ಈಗಾಗಲೇ ತಿಳಿಸಿದ್ದಾರೆ. ಸಿಎಂ ಬದಲಾವಣೆಯಾದರೇ ತಾವು ಸ್ಥಾನ ಗಿಟ್ಟಿಸಿಕೊಳ್ಳು ಆಕ್ಷಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಮುರುಗೇಶ್ ನಿರಾಣಿ, ಖಾಸಗಿ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ. ದೆಹಲಿ ಭೇಟಿ ರಾಜಕೀಯ ಅಲ್ಲ. ವರಿಷ್ಠರು ದೆಹಲಿಯಲ್ಲಿ ಇಲ್ಲ ಎಂದಿದ್ದಾರೆ. : - - - –- .