ಕುರ್ಚಿ ಸಂಘರ್ಷಕ್ಕೆ ಬ್ರೇಕ್ ! ನೆರೆ ಪರಿಸ್ಥಿತಿ ಅವಲೋಕನಕ್ಕಾಗಿ ಸಿಎಂ ಬಿಎಸ್ವೈ ಪ್ರವಾಸ ಬೆಂಗಳೂರು, ಜುಲೈ 24, 2021 (..):ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ಸಿಎಂ ಬಿಎಸ್‌ವೈ ನಾಳೆ ಬೆಳಗಾವಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಇರುವಂತೆ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.