ಸಿಎಂ ಬದಲಾವಣೆ ಬಹುತೇಕ ಖಚಿತ: ನಾನು ಇದೇ ಖಾತೆಯಲ್ಲಿ ಮುಂದುವರೆಯಲು ಇಷ್ಟ ಎಂದ ಸಚಿವ ಕೆ.ಎಸ್ ಈಶ್ವರಪ್ಪ. ದಾವಣಗೆರೆ,ಜುಲೈ,23,2021(..):ರಾಜೀನಾಮೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದು ಜುಲೈ 25ರಂದು ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಬದಲಾವಣೆ ಬಹುತೇಕ ಖಚಿತ ಎಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಕೆ.ಎಸ್ ಈಶ್ವರಪ್ಪ, ನಾಯಕತ್ವ ಬದಲಾವಣೆ ಬಹುತೇಕ ಖಚಿತ. ಆದರೆ ಇನ್ನು ಏನೇನು ಬದಲಾವಣೆಯಾಗುತ್ತದೆ ಎಂಬುದು ಗೊತ್ತಿಲ್ಲ. ನಾನು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವನಾಗಿರಲು ಇಷ್ಟ. ನಾನು ಇದೇ ಖಾತೆಯಲ್ಲಿ ಮುಂದುವರೆಯಬೇಕೆಂಬ ಆಸೆ ಇದೆ ಎಂದರು. ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಸೇರಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ತೀರ್ಮಾನ ಮಾಡುತ್ತಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. : - – - -