ಪಿಯು ಫಲಿತಾಂಶ ಹೆಚ್ಚಳ: ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲು ಮೈಸೂರು ವಿವಿ ಸಜ್ಜು ಬೆಂಗಳೂರು, ಜುಲೈ 24, 2021 (..):ಈ ಸಾಲಿನಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಮೈಸೂರು ವಿವಿ ಸಿದ್ಧವಾಗಿದೆ. ಕಾಲೇಜಿಗೆ ದಾಖಲಾತಿ ಹೆಚ್ಚಿನ ಬೇಡಿಕೆ ಬಂದರೆ, ಹೆಚ್ಚುವರಿ ಸೀಟುಗಳನ್ನು ನೀಡಲು ಸಿದ್ದವಾಗಿರುವದಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಮಾಹಿತಿ ನೀಡಿದ್ದು, ಈ ಸಾಲಿನಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲು ಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಈ ವರ್ಷ ಪಿಯುಸಿ ಫಲಿತಾಂಶ ಹೆಚ್ಚಾಗಿದ್ದು, ಪದವಿ ತರಗತಿಗಳಿಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಲಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜುಗಳು ಸೇರಿ 220 ಕಾಲೇಜುಗಳಿವೆ. ಎಲ್ಲೆಡೆಯೂ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್ 1 ರಿಂದ ಮೊದಲ ವರ್ಷದ ಪದವಿ ತರಗತಿಗಳು ಆರಂಭವಾಗಲಿದ್ದು, ಈ ವರ್ಷ 5 ಸಾವಿರ‌ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ದಾಖಲಾಗಬಹುದು ಎಂದು ನಿರೀಕ್ಷಿಸಲಾಗಿದೆ. ಅಂದಾಜು 2 ಲಕ್ಷ ವಿದ್ಯಾರ್ಥಿಗಳು ರಾಜ್ಯದಲ್ಲಿ ಪದವಿ ತರಗತಿಗಳಿಗೆ ದಾಖಲಾಗುತ್ತಾರೆ ಎಂದು ಅಂದಾಜಿಸಲಾಗಿದೆ ಎಂದು ಹೇಮಂತ್ ಕುಮಾರ್ ತಿಳಿಸಿದ್ದಾರೆ. . . . , -, . , . . . “220 , . ,” . 1. .: / . . / 2nd / / / / /