ತಜ್ಞರ ವರದಿ ಬಳಿಕ ಶಾಲೆ ಆರಂಭದ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ- ಶಿಕ್ಷಣ ಸಚಿವ ಸುರೇಶ್ ಕುಮಾರ್. ಬೆಂಗಳೂರು,ಜುಲೈ,22,2021(..):ತಜ್ಞರ ವರದಿ ಬಂದ ಬಳಿಕ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಶಾಲೆ ಪುನಾರಂಭದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸದ್ಯಕ್ಕೆ ಶಾಲೆ ಆರಂಭವಿಲ್ಲ. ಇನ್ನೆರೆಡು ದಿನಗಳಲ್ಲಿ ತಜ್ಞರ ವರದಿ ನಮ್ಮ ಕೈ ಸೇರಲಿದೆ. ಬಳಿಕ ಶಾಲೆ ಆರಂಭದ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಕೊರೋನಾ 2ನೇ ಅಲೆ ಹಿನ್ನೆಲೆ ಶಾಲಾ ಕಾಲೇಜುಗಳು ಬಂದ್ ಆಗಿದ್ದು ಇದೀಗ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದ ಬೆನ್ನಲ್ಲೆ ಶಾಲಾ ಕಾಲೇಜುಗಳ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಮಧ್ಯೆ ಈಗಾಗಲೇ ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು ಜುಲೈ 26ರಿಂದ ಪದವಿಕಾಲೇಜುಗಳು ಪುನಾರಂಭಗೊಳ್ಳಲಿವೆ. … : , 22, 2021 (..): . ’ . . “ ’ . ,” . -19 . 26.: / / / . / / : – – – - – -