ಪಾರಂಪರಿಕ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನ. ಮೈಸೂರು,ಜುಲೈ,20,2021(..):ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡ ಲ್ಯಾನ್ಸ್ ಡೌನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಪಾರಂಪರಿಕ ತಜ್ಞ ರಂಗರಾಜ್ ಚಾಲನೆ ನೀಡಿದರು. ಲ್ಯಾನ್ಸ್ ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನ ಕೆಡವಿ ಪುನಹ ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ 10 ದಿನಗಳ ಕಾಲ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಈ ಅಭಿಯಾನಕ್ಕೆ ಲ್ಯಾನ್ಸ್ ಡೌನ್ ಕಟ್ಟಡದ ಮುಂದೆಯೇ ಪಾರಂಪರಿಕ ತಜ್ಞ ರಂಗರಾಜ್ ಚಾಲನೆ ನೀಡಿದರು. ಪಾರಂಪರಿಕ ಕಟ್ಟಡ ಸಂರಕ್ಷಣಾ ತಂಡ ಈ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಸಹ ಸಂಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳು ಈಗಲೂ ಸುರಕ್ಷಿತವಾಗಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಟ್ಟಡಗಳನ್ನು ಕೆಡವುದು ಬೇಡ ಎಂದು ಸರ್ಕಾರಕ್ಕೆ ಪಾರಂಪರಿಕ ಕಟ್ಟಡ ಸಂರಕ್ಷಣಾ ತಂಡ ಮನವಿ ಮಾಡಿದೆ. … , 20, 2021 (..): ’ , . . . . . . , , .: / / / / / : - - – –- - -