ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರಿಕೆ ಬೆಂಗಳೂರು, ಜುಲೈ 20, 2021 (..):ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್​ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಜುಲೈ 19ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮನೆಗಳು ಜಲಾವೃತಗೊಂಡಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜು. 22 ಮತ್ತು 23ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ….. 4 , 20, 2021 (..): ... , , 19 23. - . . . , , , , , .: / / /