ಜು.26ಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೇವಲ ವದಂತಿ ಅಷ್ಟೆ ; ಡಿ.ಸಿ.ಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ. ಬೆಂಗಳೂರು.ಜುಲೈ.19,2021( ..)ಜುಲೈ 26 ಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. ಸಿ.ಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದ ಜೂತೆ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಇನ್ನೂ ಎರಡು ವರ್ಷಗಳ ಕಾಲ ಬಿ,ಎಸ್ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು. ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಬರುವುದಿಲ್ಲ, ಮುಖ್ಯಮಂತ್ರಿ ಆಗಬೇಕೆನ್ನುವ ಆಸೆ ಪ್ರತಿಯೊಬ್ಬರಿಗೂ ಇರುತ್ತದೆ ಆದ್ದರಿಂದ ಮುಖ್ಯಮಂತ್ರಿ ಆಗಬೇಕೆಂದರೆ ಮೊದಲು ಶಾಸಕರಾಗಿ, ಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ ನಂತರ ಮುಖ್ಯಮಂತ್ರಿ ಆಗುವುದು ಸೂಕ್ತ ಎಂದು ತಿಳಿಸಿದರು. : - – 26 – - -