ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆಯಿಂದ ರಾಜ್ಯಕ್ಕೆ ಯಾವುದೇ ರೀತಿಯ ನಷ್ಟವಾಗಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ. ಬೆಂಗಳೂರು.ಜುಲೈ.19.2021( ..):ರಾಜ್ಯದಲ್ಲಿ ಭ್ರಷ್ಟ ಮುಖ್ಯಮಂತ್ರಿಗಳಿಗೆ ಅವಕಾಶ ಇಲ್ಲ, ಮೊದಲು ಬಿ,ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ತೊಲಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ಹಿನ್ನೆಲೆ, ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆಯಿಂದ ರಾಜ್ಯಕ್ಕೆ ಯಾವುದೇ ರೀತಿಯ ನಷ್ಟವಾಗುವುದಿಲ್ಲ. ಸಿ.ಎಂ ಬದಲಾವಣೆಯ ಸಮಯ ಹತ್ತಿರ ಬಂದಿದೆ ಎಂದು ಲೇವಡಿ ಮಾಡಿದರು. ನಾನು ಮೊದಲೇ ಹೇಳಿದ್ದೆ ಕೆಲವೇ ದಿನಗಳಲ್ಲಿ ಸಿ.ಎಂ ಬದಲಾವಣೆಯಾಗುತ್ತಾರೆ ಎಂದು. ಅದು ಈಗ ನಿಜವಾಗುತ್ತಿದೆ. ಸಿ.ಎಂ ಬದಲಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅನುಕೂಲ ಹಾಗೂ ಅನಾನುಕೂಲಗಳು ಲಭಿಸುವುದಿಲ್ಲ. ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜ್ಯದಿಂದ ಹೋಗುವುದು ಉತ್ತಮ ಎಂದು ತಿಳಿಸಿದರು. : – - – – - - .