ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಬಗ್ಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ. ಬೆಂಗಳೂರು,ಜುಲೈ,19,2021(..):ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆಡಿಯೋ ವೈರಲ್ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಆಡಿಯೋ ನಕಲಿ ಎಂದು ನಳೀನ್ ಕುಮಾರ್ ಕಟೀಲ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ತನಿಖೆ ನಡೆಸುವಂತೆ ನಳೀನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ. ಜುಲೈ 26 ರಂದು ಬಿಜೆಪಿ ಶಾಸಕಾಂಗದ ಸಭೆ ನಡೆಯಲಿದೆ ಎಂದರು. ಸಿಎಂ ಬಿಎಸ್ ವೈ ಬದಲಾವಣೆ ಪ್ರಶ್ನೆಯೇ ಇಲ್ಲ. ಕೇವಲ ಇದು ಊಹಾಪೂಹ ಎಂದು ಸುರೇಶ್ ಕುಮಾರ್ ತಿಳಿಸಿದರು. : - - –