ನಾಳೆಯಿಂದ ನೈಟ್ ಕರ್ಫ್ಯೂ ಅವಧಿಯಲ್ಲಿ ಬದಲಾವಣೆ: ಥಿಯೇಟರ್ ಓಪನ್’ಗೂ ಅನುಮತಿ ಬೆಂಗಳೂರು, ಜುಲೈ 18, 2021 (..):ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾಳೆಯಿಂದ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ನೈಟ್ ಕರ್ಫ್ಯೂ ಸಮಯದಲ್ಲಿಯೂ ಬದಲಾವಣೆ ಮಾಡಲಾಗಿದ್ದು, ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇಂದು ಸಿಎಂ ಬಿ ಎಸ್ ವೈ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.