ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವು. ನವದೆಹಲಿ,ಜೂನ್,4,2024 (..): ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಭರ್ಜರಿ ಜಯ ಸಾಧಿಸಿದ್ದಾರೆ . ವಾರಣಾಸಿ ಕ್ಷೇತ್ರದಲ್ಲಿ 1,52, 513 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ದ ಗೆಲುವು ಸಾಧಿಸುವ ಮೂಲಕ 3 ನೇ ಬಾರಿ ಆಯ್ಕೆಯಾಗಿದ್ದಾರೆ. 2014 ಹಾಗೂ 2019ರಲ್ಲಿ ಇದೇ ವಾರಾಣಸಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಈ ಬಾರಿಯೂ ಗೆಲುವಿನ ನಗೆ ಬೀರುವ ಮೂಲಕ ಹ್ಯಾಟ್ರಿಕ್​ ಗೆಲುವು ದಾಖಲಿಸಿದ್ದಾರೆ. ಪ್ರಾರಂಭದ ಕೆಲವು ಸುತ್ತುಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರೈ ಅವರು ಮುನ್ನಡೆ ಸಾಧಿಸಿದ್ದರು. 2014 ಹಾಗೂ 2019ರಲ್ಲಿಯೂ ಕಾಂಗ್ರೆಸ್​ ಅಜಯ್​ ರೈ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಎರಡೂ ಸಲವೂ ಅಜಯ್​ ಅವರು ಮೋದಿ ವಿರುದ್ಧ ಸೋಲನಭವಿಸಿದ್ದರು. ಆದರೂ ಈ ಬಾರಿ ಮತ್ತೆ ಮೋದಿ ವಿರುದ್ಧವೇ ಕಣಕ್ಕಿಳಿದಿದ್ದರು. ಇದೀಗ ಮೂರನೇ ಬಾರಿಯೂ ಸೋಲನಭವಿಸಿದ್ದಾರೆ. : , , ,