ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ತೆರೆ ಎಳೆದ ಸಿಎಂ ಬಿಎಸ್ ವೈ. ನವದೆಹಲಿ,ಜುಲೈ,17,2021(..):ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಿಂದಲೇ ವಿರೋಧಿ ಬಣಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನನಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜೀನಾಮೆ ಮಾತೇ ಶುದ್ಧ ಸುಳ್ಳು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ. ಆಗಸ್ಟ್ ಮೊದಲವಾರದಲ್ಲಿ ಮತ್ತೆ ದೆಹಲಿಗೆ ಬರಲಿದ್ದೇನೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದರು. ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಹಿರಿಯ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಮೇಕೆದಾಟು ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುವುದು ಸರಿಯಲ್ಲ. ಈ ಯೋಜನೆ ಜಾರಿಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ. ಈ ಬಗ್ಗೆ ಸಂಬಂಧ ಪಟ್ಟವರಿಗೆ ಮನವರಿಕೆ ಮಾಡಿ ಯೋಜನೆ ಆದಷ್ಟು ಶೀಘ್ರ ಆರಂಭಿಸುತ್ತೇವೆ. ಎರಡೂ ರಾಜ್ಯ ಗಳು ಸಹೋದರರಂತೆ ನಡೆದುಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ.‌ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ ಎಂದರು. … : , 17, 2021 (..): .. .“ . . . ,” .“ . ,” . , , “ . ’ . . . .”: / / / / / / / / : – - -