ಶುಲ್ಕ ಸಮರಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ. ಬೆಂಗಳೂರು,ಜುಲೈ,17,2021(..):ಶುಲ್ಕ ಪಾವತಿಸದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (’ ) ಗ್ರೀಷ್ಮಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ( ) ಪ್ರಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರಟಗೆರೆ ಹನುಮಂತಪುರ ಮೂಲದ ವಿದ್ಯಾರ್ಥಿನಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷದ ಶಾಲಾ ಶುಲ್ಕ, ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. 9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿರುವ ವಿದ್ಯಾರ್ಥಿನಿ ಈ ಬಾರಿ ಹಣವಿಲ್ಲದ ಕಾರಣಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳುವುದು () ಸಾಧ್ಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿನಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ ನೇಣುಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಈ ವೇಳೆ ಆಕೆಯ ಪೋಷಕರು ರಕ್ಷಣೆ ಮಾಡಿದ್ದಾರೆ. ಈ ವಿಚಾರ ತಿಳಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಗಸ್ಟ್ ನಲ್ಲಿ ಪರೀಕ್ಷೆಗೆ ಅವಕಾಶ ನೀಡುವ ಭರವಸೆಯನ್ನ ವಿದ್ಯಾರ್ಥಿನಿಗೆ ಕೊಟ್ಟಿದ್ದಾರೆ ಎನ್ನಲಾಗಿದೆ. : –- - - –