ಮೈಸೂರಿನ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ಮಾಡಲು ತೀರ್ಮಾನ. ಮೈಸೂರು,ಜುಲೈ,16,2021(..):ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಡೆಮಾಲಿಸ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬೈರತಿ ಬಸವರಾಜ್, ಸದ್ಯದಲ್ಲಿಯೇ ದೇವರಾಜ ಮಾರುಕಟ್ಟೆ ಮತ್ತು ಲಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ಮಾಡಲಾಗುವುದು. ಮುಂದಿನ ಎರಡು ತಿಂಗಳ ಒಳಗೆ ನೆಲಸಮಗೊಳಿಸಿ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ. ಸದ್ಯ ಎರಡು ಕಟ್ಟಡಗಳು ಶಿಥಿಲಾವಸ್ಥೆ ತಲುಪಿದೆ. ಕಟ್ಟಡ ಉಳಿಸಿಕೊಳ್ಳುವುದು ಬಹಳ ಕಷ್ಟವಾಗುತ್ತದೆ. ಪಾರಂಪರಿಕ ಶೈಲಿಯಲ್ಲಿಯೇ ಎರಡು ಕಟ್ಟಡ ನಿರ್ಮಾಣಕ್ಕೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು. ದೇವರಾಜ ಮಾರುಕಟ್ಟೆಗೆ 100ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಲಾನ್ಸ್ ಡೌನ್ ಬಿಲ್ಡಿಂಗ್ ಗೆ ಸರಿಸುಮಾರು 45ಕೋಟಿ ರೂ ಬೇಕು. ದೇವರಾಜ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಯೇ ಕಟ್ಟಡ ನೆಲಸಮ ಮಾಡಲಾಗುವುದು. ಸದ್ಯ ಇರುವ ವ್ಯಾಪಾರಸ್ಥರಿಗಳಿಗೆ ಮಾತ್ರ ಮಳಿಗೆ ನೀಡುತ್ತೇವೆ. ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡುತ್ತೇವೆ. ಮತ್ತೊಮ್ಮೆ ಕಟ್ಟಡಗಳ ವೀಕ್ಷಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. 15 ದಿನಗಳೊಳಗೆ ಪುರಭವನದ ಆವರಣದಲ್ಲಿರುವ ಮಲ್ಟಿಲೆವಲ್ ಪಾರ್ಕಿಂಗ್ ಚಾಲನೆ ನೀಡಲಾಗುತ್ತದೆ. ಸದ್ಯದಲ್ಲೇ ಕ್ಲೀನಿಂಗ್ ಕಾರ್ಯ ನಡೆಸಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಸಚಿವ ಭೈರತಿ ಬಸವರಾಜು ಹೇಳಿದರು. …. , 16, 2021 (..): . . “ . ,” .“ .100 , . 45 . . . , . - ,” . , - 15 .: / / / / / / : – - - – -